ಕುಂದಾಪುರ : ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಘಟಕ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಏಡ್ಸ್ ದಿನ 2023 ರ ಕಾರ್ಯಕ್ರಮವನ್ನು ಸಮುದಾಯಗಳು ಮುನ್ನಡೆಸಲಿ ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಾಪುರ ಸರಕಾರಿ ವಿಭಾಗೀಯ ಆಸ್ಪತ್ರೆ ಆಪ್ತ ಸಮಾಲೋಚಕರಾದ ನಳಿನಾಕ್ಷಿ ಎಂ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಇಂದಿನ ವಿಶ್ವ ಏಡ್ಸ್ ದಿನದಂದು ಎಚ್.ಐ.ವಿ ಸೋಂಕಿತರನ್ನು ಸಮಾನವಾಗಿ ಕಾಣುವುದರ ಮೂಲಕ ಪ್ರತಿಯೊಬ್ಬ ವ್ಯಕ್ತಿಯೂ ಆರೈಕೆ ಸಹಾಯ ಮತ್ತು ಸಮಾನ ಅವಕಾಶಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸಿ ಯಾರೂ ಸಹ ತಾರತಮ್ಯಕ್ಕೆ ಒಳಗಾಗದೇ ಆರೋಗ್ಯಯುತ ಸಮಾಜವನ್ನು ನಿರ್ಮಾಣ ಮಾಡುವುದರಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿ ಈ ನಿಟ್ಟಿನಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿರುವುದಲ್ಲದೇ ವಿದ್ಯಾರ್ಥಿಗಳಿಗೆ ಎಚ್.ಐ.ವಿ. ಏಡ್ಸ್ ಹರಡುವಿಕೆ ಹಾಗೂ ತಡೆಗಟ್ಟುವಿಕೆ ಮತ್ತು ಮುಂಜಾಗ್ರತ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲರಾದ ಡಾ. ಚಂದ್ರಾವತಿ ಶೆಟ್ಟಿ ವಹಿಸಿದ್ದರು. ರಾಷ್ಟಿçÃಯ ಸೇವಾ ಯೋಜನೆಯ ಸಂಯೋಜಕರಾದ ರಾಘವೇಂದ್ರ ಶೆಟ್ಟಿ ಎಸ್ ಸ್ವಾಗತಿಸಿದರು. ವಿದ್ಯಾರ್ಥಿನಿ ರಂಜಿನಿ ಕಾರ್ಯಕ್ರಮ ನಿರೂಪಿಸಿದರು