ಕುಂದಾಪುರ : ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳೊಂದಿಗೆ ಶಾಸಕರು ಸಭೆ ನಡೆಸಿದರು ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳ ನೋಂದಾವಣಿ ವಿಳಂಬ ಆಗುವುದರ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆ ಇಂದಿನಿಂದಲೇ ಬೇಕಾಗುವಂತಹ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳುವಂತೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎ.ಕಿರಣ್ ಕುಮಾರ್ ಕೊಡ್ಗಿಯವರು ಸೂಚನೆ ನೀಡಿದರು, ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಶಾಸಕರು ತಿಳಿಸಿದರುಇಂದು ವೈದ್ಯಾಧಿಕಾರಿಗಳ ಸಭೆಯಲ್ಲಿ ಕುಂದಾಪುರ ತಾಲೂಕು ಸಹಾಯಕ ಆಯುಕ್ತರಾದ ರಶ್ಮಿ ಎಸ್. ಆರ್ ಕುಂದಾಪುರ ಸರಕಾರಿ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ರಾಬರ್ಟ್ ಮತ್ತು ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು