Home » ಟೈಲರ್ ಕ್ಷೇಮ ನಿಧಿ ಮಂಡಳಿ
 

ಟೈಲರ್ ಕ್ಷೇಮ ನಿಧಿ ಮಂಡಳಿ

by Kundapur Xpress
Spread the love

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ ಕರ್ನಾಟಕ ರಾಜ್ಯದಾದ್ಯಂತ ಅಸಂಘಟಿತ ವಲಯದಲ್ಲಿ ಸುಮಾರು 10 ಲಕ್ಷಕ್ಕೂ ಮಿಕ್ಕಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 6,000 ಟೈಲರ್ ವೃತ್ತಿ ನಿರತ ಭಾಂಧವರು ಇದ್ದು, ಜೀವನ ಭದ್ರತೆ ತೀರಾ ಅತ್ಯವಶ್ಯಕವಾಗಿದೆ. ಇವರಿಗೆ ಟೈಲರ್ ಕ್ಷೇಮ ನಿಧಿ ಮಂಡಳಿ ರಚಿಸಿ ಆ ಮೂಲಕ ಭವಿಷ್ಯ ನಿಧಿ ಹಾಗೂ ಮಾಸಿಕ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಮತ್ತು ಕುಟುಂಬ ಆರೋಗ್ಯ ವಿಮಾ ಯೋಜನೆಯನ್ನು ಒದಗಿಸುವ ಬಗ್ಗೆ ಸದನದ ಗಮನ ಸೆಳೆದರು.

   

Related Articles

error: Content is protected !!