ಉಡುಪಿ : ಪುತ್ತಿಗೆ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ ಧಾರ್ಮಿಕ ಸಭೆಯಲ್ಲಿ ಪೂಜ್ಯ ಶ್ರೀಪಾದರು ದೇವರಿಗೆ ಪೂಜೆ, ದೀಪ, ಧೂಪ, ನೈವೇದ್ಯ ಸಮರ್ಪಣೆ ಹೊರತಾಗಿ ಪ್ರತಿಯೊಬ್ಬರೂ ಆಂತರಿಕವಾಗಿ ಭಗವದ್ ಚಿಂತನೆ ನಡೆಸಬೇಕು
ಎಂದು ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥಶ್ರೀಪಾದರು ನುಡಿದರು ಅವರು ಪುತ್ತಿಗೆ ಮಠದ ಸಭಾಂಗಣದಲ್ಲಿ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತದಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಬುಧವಾರ ಆಶೀರ್ವಚನ ನೀಡಿದರು
ಈ ಬಾರಿಯದ್ದು ವಿಶ್ವ ಗೀತಾ ಪರ್ಯಾಯ ಎಂದು ಘೋಷಿಸಿದ ಶ್ರೀಗಳು, ದೇವರ ಪೂಜೆಯ ಸಂಕಲ್ಪ, ಪೂರ್ಣತೆ ನಡುವೆ ಒಂದೊಂದು ಫಲವಿದೆ. ಪ್ರತಿಯೊಬ್ಬರಿಗೂ ದೇವರ ಪೂಜೆ, ಅನುಗ್ರಹದ ಅಪೇಕ್ಷೆಯಿದ್ದರೂ ಜಗತ್ತಿಗೆ ಭಗವಂತನ ಅನುಗ್ರಹದ ಫಂಡ್ ಬಂದರೆ ಎಲ್ಲವೂ ಸುಲಲಿತ ಎಂದರು. ಮನುಷ್ಯ ಯತ್ನದ ಜತೆಗೆ ದೇವರ ಅನುಗ್ರಹ ಬೇಕು. ವೈಯಕ್ತಿಕಕ್ಕಿಂತ ಜಗದ ಶ್ರೇಯಸ್ಸಿನ ಪೂಜೆಯೇ ಪರ್ಯಾಯ. ಒಂದು ಕೋಟಿ ಜನರಿಂದ ಭಗವದ್ಗೀತೆ ಬರೆಸುವ ಸಂಕಲ್ಪ ನಮ್ಮದು, ಅದನ್ನು ಈಡೇರಿಸಲು ಶ್ರೀಕೃಷ್ಣನಿದ್ದಾನೆ.ಜಗತ್ತಿನ ಮೂಲೆ ಮೂಲೆಯಲ್ಲೂ ಗೀತಾ ಪ್ರಚಾರವಾಗಿದೆ. ಪರ್ಯಾಯದಲ್ಲಿ ದೇವರ ಸೇವೆ ಜತೆಗೆ ಭಕ್ತರ ಸೇವೆಯ ಅವಕಾಶ ಉಡುಪಿ ಜನರಿಗಿದೆ.
ಜೀವನ ಕ್ಷಣಿಕ, ಹೀಗಾಗಿ ಅಮೆರಿಕದಲ್ಲಿ ತೆರೆದಿಟ್ಟ ಅಂಗಡಿಗಳನ್ನು ಬ್ಲ್ಯಾಕ್ ಫ್ರೈಡೇ ದಿನ ಸೂರೆ ಮಾಡುವಂತೆ ( ಪರ್ಯಾಯ ಪೀಠದಿಂದ ಇಳಿವ ಮಠದ ಕೊನೆಯ ದಿನವೂ ಸೂರೆ ಸಂಪ್ರದಾಯವಿದೆ) ಹೀಗಾಗಿ ದೇವರ ಸೇವೆಯ ಅವಕಾಶವನ್ನು ಒಂದಿನಿತೂ ಬಿಡದೆ ಬಾಚಿಕೊಳ್ಳಬೇಕು ಎಂದರು
ಡಾ.ಉಷಾ ಪಲ್ಲವಿ ಬಲ್ಲಾಳ್ ಪ್ರಾರ್ಥಿಸಿದರು. ಮಠದ ದಿವಾನ ನಾಗರಾಜ ಆಚಾರ್ಯ ಸ್ವಾಗತಿಸಿದರು. ಪರ್ಯಾಯ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್ ಪ್ರಾಸ್ತಾವಿಕ ಮಾತನ್ನಾಡಿದರು.
ರಮೇಶ್ ಭಟ್ ಕೆ. ನಿರೂಪಿಸಿ ಬೆಳಪು ದೇವಿಪ್ರಸಾದ್ ಶೆಟ್ಟಿ ವಂದಿಸಿದರು. ಡಾ.ಅರ್ಚನಾ ನಂದ ಕುಮಾರ್ ರಚಿತ ಕೃತಿಯನ್ನು ಯೂಟ್ಯೂಬ್ ಮೂಲಕ ಶ್ರೀಪಾದರು ಬಿಡುಗಡೆ ಮಾಡಿದರು.