ಕಾಪು : ಖ್ಯಾತ ಸಮಾಜ ಸೇವಕರಾಗಿ ಧಾರ್ಮಿಕ, ಸಾಮಾಜಿಕ ಮತ್ತು ನಾಟಕ ಕಲಾ ರಂಗ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಸಮಾಜ ಸೇವಾ ರತ್ನ ಕಾಪು ಲೀಲಾಧರ ಶೆಟ್ಟಿಯವರ ನಿಧನ ದುಃಖ ತಂದಿದೆ.
ರಂಗತರಂಗ ಕಾಪು ಸಂಸ್ಥೆಯ ಸ್ಥಾಪಕರಾಗಿ ಅನೇಕ ಹೊಸ ಪ್ರತಿಭೆಗಳನ್ನು ಬೆಳಕಿಗೆ ತಂದ ಖ್ಯಾತಿ ಕಾಪು ಲೀಲಾಧರ ಶೆಟ್ಟಿಯವರಿಗೆ ಸಲ್ಲುತ್ತದೆ. ಲಿಲಾಧರ ಶೆಟ್ಟಿಯವರ ಅಕಾಲಿಕ ನಿಧನ ಜಿಲ್ಲೆಯ ಸಾಮಾಜಿಕ, ಧಾರ್ಮಿಕ ಮತ್ತು ನಾಟಕ ಕಲಾ ರಂಗ ಕ್ಷೇತ್ರಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ.
ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಜಿಲ್ಲೆಯ ಶಾಸಕರುಗಳಾದ ಯಶ್ಪಾಲ್ ಎ. ಸುವರ್ಣ, ವಿ.ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ ಮತ್ತು ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಸಂತಾಪ ವ್ಯಕ್ತಡಿಸಿದ್ದಾರೆ