ಕುಂದಾಪುರ : ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಇಂದು ಐರೋಡಿ ಗ್ರಾಮ ಪಂಚಾಯಿತಿನಲ್ಲಿ ನೆರವೇರಿತು ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿಯವರು ಉದ್ಘಾಟಿಸಿದರು,
ಕಾರ್ಯಕ್ರಮವನ್ನು ಉದ್ದೇಶಿಸಿ ಮಾಜಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ದೇಶದಾದ್ಯಂತ ಕೈಗೊಳ್ಳಲಾಗುತ್ತಿದ್ದು, ಈ ಕೇಂದ್ರ ಸರ್ಕಾರದ ಯೋಜನೆಗಳ ಪ್ರಯೋಜನಗಳು ಎಲ್ಲಾ ಉದ್ದೇಶಿತ ಫಲಾನುಭವಿಗಳಿಗೆ ಸಮಯಕ್ಕೆ ಅನುಗುಣವಾಗಿ ತಲುಪುವುದನ್ನು ಖಾತ್ರಿಪಡಿಸುವ ಮೂಲಕ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಗಳ ಅನುಷ್ಠಾನದ ಖಾತ್ರಿಯನ್ನು ಸಾಧಿಸುವ ಗುರಿಯನ್ನು ಕೂಡಾ ಹೊಂದಿದೆ ಎಂದು ಹೇಳಿದರು,
ತದನಂತರ ದೇಶದ ನೆಚ್ಚಿನ ಪ್ರಧಾನ ಮಂತ್ರಿಯಾದ ಸನ್ಮಾನ್ಯ ನರೇಂದ್ರ ಮೋದಿಜಿ ಅವರ, ವಿಕಸಿತ ಭಾರತದ ರಥಯಾತ್ರೆಯಲ್ಲಿ ನೇರ ಪ್ರಸಾರವನ್ನು ವೀಕ್ಷಿಸಿದರು. ಕಾರ್ಯಕ್ರಮದಲ್ಲಿ, ಐರೋಡಿ ಗ್ರಾಮ ಪಂಚಾಯತಿನ ಅಧ್ಯಕ್ಷರು ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ಮ್ಯಾನೇಜರ್, ಅಧಿಕಾರಿ ವರ್ಗದವರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು