ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಸಂಸ್ಕೃತ ವಿಭಾಗದ ಸಂಸ್ಕೃತ ಸಂಘದ ಆಶ್ರಯದಲ್ಲಿ ಪ್ರಮಾಣಪತ್ರ* ವಿತರಣಾ ಕಾರ್ಯಕ್ರಮ ನಡೆಯಿತು. *ಶ್ರೀ ಸುರಸರಸ್ವತಿ ಸಭಾ, ಶೃಂಗೇರಿ* ಇವರು ಕಳೆದ ಶೈಕ್ಷಣಿಕ ವರ್ಷದಲ್ಲಿ ನಡೆಸಿದ ಪ್ರಥಮಾ, ದ್ವಿತೀಯಾ, ತೃತೀಯಾ, ಹಾಗೂ ಪ್ರವೇಶ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ *ಪ್ರಮಾಣಪತ್ರ* ಮತ್ತು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ *ಬೆಳ್ಳಿ ಪದಕ* ನೀಡಲಾಯಿತು. ಜೊತೆಗೆ *ಜ್ಯೋತಿಷ್ಯ ಸರ್ಟಿಫಿಕೇಟ್ ಕೋರ್ಸನ್ನು* ಪೂರೈಸಿದ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿಯವರು *” ಸಂಸ್ಕೃತ ದೇವ ಭಾಷೆಯಾಗಿದೆ, ಈ ಭಾಷೆ ತನ್ನದೇ ಆದ ಘನತೆ, ಗೌರವವನ್ನು ಹೊಂದಿದ್ದು ಎಲ್ಲಾ ಭಾಷೆಗಳ ಮಾತೃ ಭಾಷೆಯಾಗಿದೆ “* ಎಂದರು. ಹಾಗೂ ಇಂತಹ ಅರ್ಥಗರ್ಭಿತ ಕಾರ್ಯಕ್ರಮವನ್ನು ಮುಂದುವರೆಸಿಕೊಂಡು ಬಂದಿರುವುದಕ್ಕಾಗಿ ಸಂಸ್ಕೃತ ವಿಭಾಗದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಪ್ರೊ. ಸತ್ಯನಾರಾಯಣ ಹತ್ವಾರ್, ಐಕ್ಯೂಎಸಿ ಸಂಯೋಜಕರಾದ ಡಾ. ವಿಜಯ್ ಕುಮಾರ್ ಕೆ. ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ. ಯಶವಂತಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕಿ ಗಾಯತ್ರಿ ಪ್ರಮಾಣಪತ್ರ ಪಡೆದ ವಿದ್ಯಾರ್ಥಿಗಳ ಹೆಸರನ್ನು ಓದಿದರು. ಗಣಿತ ವಿಭಾಗದ ಮುಖ್ಯಸ್ಥೆ ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು ದ್ವಿತೀಯ ಬಿ.ಸಿ.ಎ. ವಿದ್ಯಾರ್ಥಿ ಶ್ರೀನಿಧಿ ಅಡಿಗ ಪ್ರಾರ್ಥನೆ ಮಾಡಿದರು.