ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ನಾರಾಯಣಗುರು ಸಮಾಜ ಹಿತರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಜ.22ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ತಿಳಿಸಿದರು
ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಹಿಂದುಳಿದ ಜಾತಿಗಳಿಗೆ 2-ಎ ಮಿಸಲಾತಿ ರಕ್ಷಣೆ ಮತ್ತು ಸಮಾಜದ ಅಭಿವೃಧ್ದಿಗಾಗಿ ನಿಗಮ ಮಂಡಳಿ ಹಾಗೂ ಶರಾವತಿ ಮುಳುಗಡೆ ಸಂತ್ರಸ್ಥರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಜ. 22ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಸರಕಾರಿ ಪ ಪೂ ಕಾಲೇಜು ಮೈದಾನದಲ್ಲಿ ಬೃಹತ್ ಹಕ್ಕೋತ್ತಾಯ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೋಳ್ಳುವಂತೆ ಮನವಿ ಮಾಡಿದರು