ಮಂಗಳೂರು : ಅಯೋಧ್ಯೆಯಲ್ಲಿ ಜ.22ರಂದು ರಾಮಮಂದಿರ ಲೋಕಾರ್ಪಣೆ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ ಮಂತ್ರಾಕ್ಷತೆಯನ್ನು ರಾಜ್ಯದ ಎಲ್ಲ ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ ಅಭಿಯಾನ ಇಂದಿನಿಂದ ಜನವರಿ 15 ರವರೆಗೆ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ತಿಳಿಸಿದ್ದಾರೆ.
ಪ್ರತಿ ಮನೆ ಮನೆಗೆ ವಿತರಿಸಲ್ಪಡುವ ಮಂತ್ರಾಕ್ಷತೆಯನ್ನು ಬಹಳ ಶ್ರದ್ಧಾಭಕ್ತಿಯಿಂದ ಕುಟುಂಬದ ಸದಸ್ಯರೊಂದಿಗೆ ಸ್ವೀಕರಿಸಬೇಕು ಮಂತ್ರಾಕ್ಷತೆಯೊಂದಿಗೆ ಶ್ರೀರಾಮ ದೇವರ ಭಾವಚಿತ್ರ ಮತ್ತು ಆಮಂತ್ರಣ ಪತ್ರಿಕೆ ಪತ್ರವನ್ನು ನೀಡಲಾಗುತ್ತದೆ ಮಂತ್ರಾಕ್ಷತೆ ವಿತರಣೆ ಸಂದರ್ಭದಲ್ಲಿ ಯಾರು ಕೂಡ ಹಣವನ್ನು ನೀಡುವಂತಿಲ್ಲ. ಯಾವುದೇ ಹಣ ಅಥವಾ ಯಾವುದೇ ವಸ್ತು ರೂಪದಲ್ಲಿ ನೀಡಬಾರದು. ಇದೊಂದು ಅಭಿಯಾನವಾಗಿರುವ ಕಾರಣ ಯಾವುದೇ ರೀತಿಯ ವ್ರತಾಚಾರಣೆ, ಕಟ್ಟು ಪಾಡು, ನಿಯಮಗಳು ಇರುವುದಿಲ್ಲ ಎಂದು ಶರಣ್ ತಿಳಿಸಿದ್ದಾರೆ