Home » ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣ
 

ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣ

ನೂತನ ಪದಾಧಿಕಾರಿಗಳ ಪದಗ್ರಹಣ

by Kundapur Xpress
Spread the love

ಉಡುಪಿ : ಭಜನಾ ಮಂಡಳಿಗಳು ಮಾದರಿ ಸಂಘಟನೆಯ ಮೂಲಕ ಏಕತೆಯನ್ನು ಸಾರುವ ಶೃದ್ಧಾ ಕೇಂದ್ರಗಳಾಗಿವೆ. ಭಜನೆಯಲ್ಲಿ ವಿಭಜನೆ ಇಲ್ಲ. ಭಜನೆಯಿಂದ ಸನಾತನ ಸಂಸ್ಕೃತಿಯ ಗತ ವೈಭವ ಅನಾವರಣಗೊಂಡಂತಾಗಿದೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಎ. ಸುವರ್ಣ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಬಲಪಾಡಿ ‘ಪ್ರಗತಿ ಸೌಧ’ ಸಭಾಂಗಣದಲ್ಲಿ ನಡೆದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ನೆರವೇರಿಸಿ ಮಾತನಾಡಿದರು.

ಇಂದು ಸಮಾಜದಲ್ಲಿ ನಡೆಯುವ ಯಾವುದೇ ಧಾರ್ಮಿಕ ಸಮಾರಂಭಗಳಲ್ಲಿ ಭಜನಾ ಮಂಡಳಿಗಳ ಪಾತ್ರ ಅತ್ಯಂತ ಮಹತ್ವಪೂರ್ಣವಾಗಿದೆ. ತಾಲೂಕಿನ ಅನೇಕ ಪರಿಣಿತ ಭಜನಾ ತಂಡಗಳು ವಿಶಿಷ್ಟ ಸಾಧನೆಗೈದು ಉಡುಪಿಗೆ ಹೆಮ್ಮೆ ತಂದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿವಿಧ ಕಾರ್ಯ ಚಟುವಟಿಕೆಗಳೊಂದಿಗೆ ಅತ್ಯಮೂಲ್ಯ ಸೇವೆ ಸಲ್ಲಿಸುತ್ತಿದೆ.

ನಮ್ಮೆಲ್ಲರ ಎಷ್ಟೋ ವರ್ಷಗಳ ಕನಸು ನನಸಾಗುವ ಶುಭ ದಿನ ಸನ್ನಿಹಿತವಾಗಿದೆ. ಜ.22ರಂದು ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನೆಯ ಪರ್ವಕಾಲದಲ್ಲಿ ಎಲ್ಲಾ ಭಜನಾ ಮಂದಿರಗಳಲ್ಲಿ ಭಜನಾ ಸೇವೆಯನ್ನು ಹಮ್ಮಿಕೊಳ್ಳುವ ಜೊತೆಗೆ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಪುಣ್ಯ ಕ್ಷಣಗಳನ್ನು ನೆನೆದು ಸಂಜೆ ಪ್ರತೀ ಮನೆಗಳಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ದೀಪಾವಳಿ ಆಚರಣೆಯ ರೀತಿ ಸಂಭ್ರಮಿಸಿ ಅವಿಸ್ಮರಣೀಯಗೊಳಿಸಬೇಕು ಎಂಬ ಕೋರಿಕೆಯ ಸಹಿತ ಉಡುಪಿ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹದಿಂದ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸಾರ್ಥಕ ಚಟುವಟಿಕೆಗಳೊಂದಿಗೆ ಯಶಸ್ಸಿನ ಪಥದಲ್ಲಿ ಮುನ್ನಡೆದು ಸರ್ವಾಂಗೀಣ ಅಭಿವೃದ್ಧಿ ಹೊಂದುವಂತಾಗಲಿ ಎಂದು ಶುಭ ಹಾರೈಸಿದರು

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಅಧ್ಯಕ್ಷ  ಬಾಲಕೃಷ್ಣ ಶೆಟ್ಟಿ ಪೇತ್ರಿಯವರು ನೂತನ ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿಯವರಿಗೆ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕುಲಾಲ್ ರವರು ನೂತನ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಯವರಿಗೆ ಅಧಿಕಾರ ಹಸ್ತಾoತರಿಸಿದರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ತಿನ ಕಾರ್ಯ ಪದ್ಧತಿ ಹಾಗೂ ಪದಾಧಿಕಾರಿಗಳ ಜವಾಬ್ದಾರಿಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

   

Related Articles

error: Content is protected !!