ಕುಂದಾಪುರ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಕುಂದಾಪುರ ಶಾಖೆಯ ಸಭಾಂಗಣದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀಎ.ಕಿರಣ್ ಕುಮಾರ್ ಕೊಡ್ಗಿಯವರ ಅಧ್ಯಕ್ಷತೆಯಲ್ಲಿ ರೈತರಿಗೆ ಸಿಗುವ ಸರಕಾರದ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಸಭೆ ನಡೆಯಿತು
ಈ ಸಭೆಯಲ್ಲಿ ಅಲ್ಪಾವಧಿ ಕೃಷಿ ಸಾಲ ರೂ 3, 00 ಲಕ್ಷದಿಂದ ರು 5 ಲಕ್ಷಕ್ಕೆ ಹಾಗೂ ಮಧ್ಯಮಾವಧಿ ಕೃಷಿ ಸಾಲ 10.ಲಕ್ಷದಿಂದ ರೂ. 15 ಲಕ್ಷಕ್ಕೆ ಹೆಚ್ಚಿಸಿದ್ದು ಸಾಲ ಪಡೆಯಲು ಅರ್ಹ ಇರುವ ರೈತರಿಂದ ಅರ್ಜಿ ಸ್ವೀಕರಿಸಿ ಸಾಲ ಮಂಜೂರಾತಿಗೆ ಕ್ರಮ ವಹಿಸುವ ಬಗ್ಗೆ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ರೈತರಿಗೆ ತಲುಪಿಸುವಂತಹ ಕ್ರಮ ತೆಗೆದುಕೊಳ್ಳಲು ಸೂಚಿಸಲಾಯಿತು. ಸಹಕಾರಿ ಇಲಾಖೆಯ ಸಹಾಯಕ ನಿಬಂಧಕರು, ಎಸ್ ಸಿ ಡಿ ಸಿ ಸಿ ಬ್ಯಾಂಕಿನ ಸಿಬ್ಬಂದಿ ವರ್ಗದವರು, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.