ಸಿದ್ದಾಪುರ : ಬೈಂದೂರು ಕ್ಷೇತ್ರದಲ್ಲಿ ಸಾಗುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ವಾಹನವನ್ನು ಇಂದು 06.01.2024 ರಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸಿದ್ದಾಪುರದಲ್ಲಿ ಬರಮಾಡಿಕೊಂಡರು. ಬಳಿಕ ಸಿದ್ದಾಪುರ ಗ್ರಾಮ ಪಂಚಾಯತ್ನಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನದ ಕಾರ್ಯಕ್ರಮದಲ್ಲಿ ವಿಧಾನಸಭಾ ವಿಪಕ್ಷ ನಾಯಕರ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಭಾಗಿಯಾಗಿ ಅಭಿಯಾನದ ಬಿತ್ತಿ ಪತ್ರವನ್ನು ಬಿಡುಗಡೆ ಮಾಡಿದರು.
ಶಾಸಕ ಗಂಟಿಹೊಳೆ ಅವರು ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಮೋದಿ ಸರ್ಕಾರದ ಯೋಜನೆಗಳ ಮಹತ್ವ ಮತ್ತು ಅರಿವನ್ನು ಜನರಿಗೆ ತಿಳಿಸಿದರು. ಜೊತೆಗೆ ಕೇಂದ್ರ ಸರ್ಕಾರದ ಎಲ್ಲಾ ಯೋಜನೆಗಳ ಲಾಭವನ್ನು ಪಡೆದುಕೊಳ್ಳಬೇಕಾಗಿ ಗ್ರಾಮಸ್ಥರಿಗೆ ಮನವಿ ಮಾಡಿಕೊಂಡರು