ಕುಂದಾಪುರ: ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಇಂದು ಬೆಳ್ವೆ ಗ್ರಾಮ ಪಂಚಾಯತ್ ಬಳಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಆಹಾರ ಸಂಸ್ಕರಣಾ ಕೈಗಾರಿಕಾ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ವೀಕ್ಷಿಸಲಾಯಿತು.
ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.