ಕುಂದಾಪುರ : ಕಲಾಕ್ಷೇತ್ರ-ಕುಂದಾಪುರ ಟ್ರಸ್ಟ್ ನೇತೃತ್ವದಲ್ಲಿ ಜ.14 ರಂದು ಕುಂದಾಪುರದ ಬೋರ್ಡ್ ಹೈಸ್ಕೂಲಿನ ಬಯಲು ರಂಗ ಮಂಟಪದಲ್ಲಿ ನಡೆಯುವ 12ನೇ ವರ್ಷದ ‘ಇನಿದನಿ’ಗೆ ವೇದಿಕೆ ಸಜ್ಜಾಗಿದೆ. ಈ ಕಾರ್ಯಕ್ರಮದಲ್ಲಿ ವಿಶೇಷ ಆಕರ್ಷಣೆ ಯಾಗಿ ಬೆಂಗಳೂರಿನ ಗಾಯಕ/ಗಾಯಕಿಯರಾದ ಅಜೇಯ್ ವಾರಿಯರ್, ಮೋಹನಕೃಷ್ಣ ಶಶಿಕಲಾ ಸುನೀಲ್, ಸಮನ್ವಿತಾ ಶರ್ಮ ಭಾಗವಹಿಸಲಿದ್ದಾರೆ
ಇವರೊಂದಿಗೆ ಮಂಗಳೂರಿನ ವೈ.ಎನ್. ರವೀಂದ್ರ, ಸ್ಥಳೀಯರಾದ ಅಶೋಕ ಸಾರಂಗ್, ಯುವ ಪ್ರತಿಭೆ ಧಾರಿಣಿ ಕುಂದಾಪುರ, ಪ್ರಾಪ್ತಿ ಹೆಗ್ಡೆ ಹಾಗೂ ಕಮಲ್ ಕಿಶೋರ್ ಕುಂದಾಪುರ ಭಾಗವಹಿಸಲಿದ್ದಾರೆ. ಹಿಮ್ಮೇಳದಲ್ಲಿ ರಾಜೇಶ್ ಭಾಗವತ್-ತಬಲಾ, ವಾಮನ್ ಕಾರ್ಕಳ-ಪ್ಯಾಡ್ ಮತ್ತು ಡ್ರಮ್ಸ್ ಗಣೇಶ್ ನವಗಿರಿ-ಕಾಂಗೋ, ಭಾಸ್ಕರ ಕುಂಬ್ಳೆ-ಡೋಲಕ್, ಶಿಜಿಮೂನ್ ಕ್ಯಾಲಿಕಟ್ ಹಾಗೂ ದೀಪಕ್ ಶಿವಮೊಗ್ಗ-ಕೀಬೋರ್ಡ್, ವರುಣ್ -ಕೊಳಲು, ಸುಮುಖ್ ಆಚಾರ್ಯ-ಸಿತಾರ್, ಮೆಲ್ವಿನ್-ಟ್ರಂಪೆಟ್, ಟೋನಿ ಡಿಸಿಲ್ವಬೇಸ್ ಗಿಟಾರ್ ಮತ್ತು ಮಂಗಳೂರಿನ ರಾಜ್ ಗೋಪಾಲ ಆಚಾರ್ಯ- ಗಿಟಾರ್ ನುಡಿಸಲಿದ್ದು, ತಂಡದ ನೇತೃತ್ವ ವಹಿಸಲಿದ್ದಾರೆ.
ಈ ಬಾರಿಯ ಇನಿದನಿಗೆ ಸಂಗೀತ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕಲಾಕ್ಷೇತ್ರ ಕುಂದಾಪುರ – ಟ್ರಸ್ಟ್ ಇದರ ಅಧ್ಯಕ್ಷರಾದ ಬಿ ಕಿಶೋರ್ ಕುಮಾರ್ ವಿನಂತಿಸಿದ್ದಾರೆ