Home » ಇನ್ನಂಜೆ ಗ್ರಾಮ ಪಂಚಾಯತ್ ವಿಕಸಿತ ಭಾರತ ಸಂಕಲ್ಪ ಯಾತ್ರೆ
 

ಇನ್ನಂಜೆ ಗ್ರಾಮ ಪಂಚಾಯತ್ ವಿಕಸಿತ ಭಾರತ ಸಂಕಲ್ಪ ಯಾತ್ರೆ

- ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ

by Kundapur Xpress
Spread the love

ಕಾಪು : ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಇನ್ನಂಜೆ ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು

ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು

ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಾಲಿನಿ ಶೆಟ್ಟಿ, ಉಪಾಧ್ಯಕ್ಷರಾದ ಸುರೇಖಾ ಶೆಟ್ಟಿ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ಜೇಮ್ಸ್ ಡಿಸಿಲ್ವ, ವಿಕಸಿತ ಭಾರತ ಸಂಕಲ್ಪ ಯಾತ್ರೆ ನೊಡಲ್ ಅಧಿಕಾರಿಗಳಾದ ನೆಹಾ ಮೆಂಡೊನ್ಸಾ, ಕೆನರಾ ಬ್ಯಾಂಕ್ ನ ಎಫ್.ಎಫ್.ಸಿ ಪ್ರದೀಪ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಚಂದ್ರಕಲಾ, ಕೃಷಿ ಇಲಾಖೆಯ ವೆಂಕಟೇಶ್, ರೈತ ಸಂಪರ್ಕ ಕೇಂದ್ರದ ಅರುಣ್ ಕುಮಾರ್, ಅಂಚೆ ಮೇಲ್ವಿಚಾರಕರಾದ ಸಂತೋಷ್ ಮಧ್ಯಸ್ಥ, ರುಡ್ ಸೆಟ್ ಸಂಸ್ಥೆಯ ಸಂತೋಷ್ ಶೆಟ್ಟಿ, ಇನ್ನಂಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚಂದ್ರಕಲಾ, ಹಾಗೂ ಇನ್ನಂಜೆ ಗ್ರಾಮ ಪಂಚಾಯತ್ ಸರ್ವ ಸದಸ್ಯರು ಉಪಸ್ಥಿತರಿದ್ದರು

   

Related Articles

error: Content is protected !!