ಬೈಂದೂರು : ಬೈಂದೂರಿನಲ್ಲಿ ಸಾಗಿಬರುತ್ತಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಕೆರಾಡಿ ಗ್ರಾಮಕ್ಕೆ ತೆರಳಿದಾಗ ಶಾಸಕ ಗುರುರಾಜ್ ಗಂಟಿಹೊಳೆ ಅವರು ಯಾತ್ರೆಯನ್ನು ಗ್ರಾಮಕ್ಕೆ ಸ್ವಾಗತಿಸಿದರು. ಬಳಿಕ ಕೆರಾಡಿ ಗ್ರಾಮ ಪಂಚಾಯತ್ನಲ್ಲಿ ಆಯೋಜಿಸಲಾದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಕ್ರಮವನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಉದ್ಘಾಟಿಸಿದರು.
ಈ ವೇಳೆ ಕೆರಾಡಿ ಶ್ರೀ ಕೇಶವನಾಥೇಶ್ವರ ದೇವಸ್ಥಾನ ಮೂಡುಗಲ್ಲು ಹತ್ತಿರ ವಿದ್ಯುತ್ ಸಂಪರ್ಕ ಇಲ್ಲದಿರುವುದರ ಬಗ್ಗೆ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದಾಗ, ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಮಾತನಾಡಿದ ಶಾಸಕರು ಅರಣ್ಯ ಇಲಾಖೆ ಜೊತೆ ಸಭೆ ನಡೆಸಿ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸುವ ಭರವಸೆ ನೀಡಿದರು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ಉಪಾಧ್ಯಕ್ಷರಾದ ಕುಸುಮ, ಸರ್ವ ಸದಸ್ಯರು ಉಪಸ್ಥಿತರಿದ್ದರು