ಉಡುಪಿ :: ಭಾರತ ಸ್ವಾತಂತ್ರ್ಯ ಚಳುವಳಿಯಲ್ಲಿ ಮುಂಚೂಣಿಯಲ್ಲಿದ್ದ ಕಟಪಾಡಿ ನಾಯಕ್ ಮನೆತನದ ಸ್ವಾತಂತ್ರ್ಯ ಹೋರಾಟಗಾರ ಪಾಂಗಾಳ ಲಕ್ಷ್ಮೀ ನಾರಾಯಣ ನಾಯಕ್ ಅವರ ಪುತ್ರ ಪಾಂಗಾಳ ಗೋಪಾಲಕೃ ಷ್ಣ ನಾಯಕ್ ಶನಿವಾರ ಸ್ವಗೃಹದಲ್ಲಿ ನಿಧನ ಹೊಂದಿದರು ಅವರಿಗೆ 92 ವರ್ಷ ವಯಸ್ಸಾಗಿತ್ತು
ಅವಿವಾಹಿತರಾಗಿದ್ದ ಅವರು ಸದಾ ಕಾಲ ಖಾದಿ ಬಟ್ಟೆ ಧರಿಸಿ, ದೇಶಿ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು ರಾಷ್ಟ್ರ ಪ್ರೇಮವನ್ನು ಬೆಳೆಸಿಕೊಂಡು ಬಂದವರು. ಪ್ರಾಣಿ ಪಕ್ಷಿಗಳ ಬಗ್ಗೆ ಅತೀವ ಕಾಳಜಿ ಹೊಂದಿದ್ದ ಅವರು ಗಾಂಧಿ ತತ್ವದಡಿ ಸರಳ ಜೀವನ ನಡೆಸುತ್ತಿದ್ದರು