ಬೈಂದೂರು : ಅಯೋಧ್ಯೆಯ ಪುಣ್ಯಭೂಮಿಯಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆಯಾಗುವ ಪುಣ್ಯ ಘಳಿಗೆಯನ್ನು ಕಣ್ತುಂಬಿಕೊಳ್ಳಲು ಬೈಂದೂರು ಕ್ಷೇತ್ರ ಸಜ್ಜಾಗಿದೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮಲಲಾನಿಗೆ ಪ್ರಾಣಪ್ರತಿಷ್ಠೆಯಾಗಲಿದ್ದು, ಬೈಂದೂರು ಕ್ಷೇತ್ರದ 300 ಕ್ಕೂ ಅಧಿಕ ದೇವಸ್ಥಾನಗಳಲ್ಲಿ ರಾಮನಾಮ ಜಪ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಶ್ರೀರಾಮ ಭಕ್ತರು ಈ ಪುಣ್ಯ ಕಾರ್ಯದಲ್ಲಿ ಭಾಗಿಯಾಗಬೇಕೆಂದು ಶಾಸಕರು ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದಾರೆ