ಉಡುಪಿ : ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯೊಂದಿಗೆ ಭಾರತದಾದ್ಯಂತ ನವೆಂಬರ್ 15 ರಿಂದ ಜನವರಿ 26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಅಲೆವೂರು ಗ್ರಾಮ ಪಂಚಾಯತ್ ಬಳಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು
ಶಾಸಕರು ಪ್ರಜ್ಞಾ ಸ್ವಸಹಾಯ ಸಂಘಕ್ಕೆ ಮಂಜೂರಾದ 9 ಲಕ್ಷ ರೂಪಾಯಿ ಮೊತ್ತದ ಸಹಾಯಧನದ ಚೆಕ್ಕನ್ನು ವಿತರಿಸಿದರು. ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು