ಕೊಲ್ಕತ್ತಾ : ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರು ಕೊಲ್ಕತ್ತಾದಲ್ಲಿ ಅಪಘಾತಕ್ಕೀಡಾಗಿದ್ದು ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಮಮತಾ ಬ್ಯಾನರ್ಜಿ ಅವರ ಕಾರು ಕೊಲ್ಕತ್ತದಲ್ಲಿ ಅಪಘಾತವಾಗಿದ್ದು ಅವರ ತಲೆಗೆ ಸಣ್ಣಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ
ಕೆಲವೇ ಗಂಟೆಗಳ ಮೊದಲು ಇವರು ಕಾಂಗ್ರೆಸ್ನೊಂದಿಗೆ ಯಾವುದೇ ಮೈತ್ರಿ ಇಲ್ಲ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮೈತ್ರಿ ಬಗ್ಗೆ ಯಾವುದೇ ನಿರ್ಧಾರವನ್ನು ಚುನಾವಣೆ ನಂತರ ತೆಗೆದುಕೊಳ್ಳಲಾಗುವುದು ಎಂದು ಮಮತಾ ಬ್ಯಾನರ್ಜಿ ಅವರು ಘೋಷಣೆ ಮಾಡಿದ್ದರು