ಉಡುಪಿ : ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 75ನೇ ಗಣರಾಜ್ಯೋತ್ಸವವನ್ನು ಜಿಲ್ಲಾ ಕಛೇರಿಯ ಬಳಿ ಆಚರಿಸಲಾಯಿತು. ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿ ಗಣರಾಜ್ಯೋತ್ಸವದ ಮಹತ್ವವನ್ನು ವಿವರಿಸಿ ಪಕ್ಷದ ಪದಾಧಿಕಾರಿಗಳಿಗೆ, ಕಾರ್ಯಕರ್ತರಿಗೆ ಹಾಗೂ ನಾಡಿನ ಸಮಸ್ತ ಜನತೆಗೆ ಶುಭಾಶಯವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಾಲಕೃಷ್ಣ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್, ಮಂಜುನಾಥ್ ಮಣಿಪಾಲ, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ಸುಭಾಷಿತ್ ಕುಮಾರ್, ಚಿನ್ಮಯ್ ಗೋಪಾಲಪುರ, ಬಿಜೆಪಿ ಜಿಲ್ಲಾ ಕಾರ್ಯಾಲಯ ಪ್ರಮುಖರಾದ ಚಂದ್ರಶೇಖರ ಪ್ರಭು, ಶಿವರಾಮ್ ಕಾಡಿಮಾರ್, ಕವಿತಾ ಮತ್ತು ನಗರ ಕಾರ್ಯಾಲಯದ ವಿಗ್ನೇಶ್ ಕಾಮತ್, ಅಶ್ವಿನಿ ಮತ್ತಿತರರು ಉಪಸ್ಥಿತರಿದ್ದರು