ಬೆಂಗಳೂರು :ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದು ಮತ್ತು ರಾಜ್ಯ ಸರ್ಕಾರದ ನಡೆಯನ್ನು ಖಂಡಿಸುವ ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ, ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಯಶಸ್ವಿಯಾಗಿ ಪೂರ್ಣಗೊಳಿಸಿದ ಮೋದಿ ಅವರನ್ನು ಅಭಿನಂದಿಸಲಾಗಿದೆ. 550 ವರ್ಷಗಳ ಭಾರತೀಯರ ಹಿಂದೂ ಸಮಾಜದ ಬಹುನಿರೀಕ್ಷಿತ ಬೇಡಿಕೆ ಈಡೇರಿಸಿ ಮಂದಿರ ಲೋಕಾರ್ಪಣೆ ಮಾಡಿದ ಪ್ರಧಾನಿ ಅವರನ್ನು ಅಭಿನಂದಿಸಲಾಗಿದ್ದು ಇದನ್ನು ಸರ್ವಾನುಮತದಿಂದ ಇದನ್ನು ಅಂಗೀಕರಿಸಲಾಗಿದೆ ಎಂದು ವಿವರಿಸಿದರು.
ಇನ್ನು ಕಾಂಗ್ರೆಸ್ ಸರ್ಕಾರದ ರೈತವಿರೋಧಿ, ದಲಿತ ವಿರೋಧಿ ನೀತಿ ಖಂಡಿಸಿ ನಿರ್ಣಯ ಅಂಗೀಕರಿಸಿದ್ದೇವೆ. ದಲಿತ ಮತ್ತು ಶೋಷಿತ ವರ್ಗಕ್ಕೆ ಮೀಸಲಿಟ್ಟ 11 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ಗ್ಯಾರಂಟಿಗಾಗಿ ಉಪಯೋಗ ಮಾಡಿ ದಲಿತ ಹಾಗೂ ಶೋಷಿತರಿಗೆ ವಂಚಿಸಿದ್ದನ್ನು ಖಂಡಿಸಲಾಗಿದೆ ಎಂದರು.