Home » ರಕ್ತಸ್ರಾವ : ಬಾಣಂತಿ ಮೃತ್ಯು
 

ರಕ್ತಸ್ರಾವ : ಬಾಣಂತಿ ಮೃತ್ಯು

by Kundapur Xpress
Spread the love

ಕುಂದಾಪುರ : ತೀವ್ರ ರಕ್ತಸ್ರಾವದಿಂದ ಬಾಣಂತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.ಗಂಗೊಳ್ಳಿ ನಿವಾಸಿ ನಾಗರತ್ನ (38) ಅವರಿಗೆ ಮಂಗಳವಾರ ಬೆಳಿಗ್ಗೆ ಹೆರಿಗೆ ನೋವು ಪ್ರಾರಂಭವಾಗಿದ್ದು, ಅವರನ್ನು ಕುಂದಾಪುರದ ಖಾಸಗಿ ನರ್ಸಿಂಗ್ ಹೋಮ್‌ಗೆ ಕರೆದುಕೊಂಡು ಹೋಗಿ ದಾಖಲಿಸಿದ್ದು, ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದರು. ಬಳಿಕ ನಾಗರತ್ನ ಅವರಿಗೆ ತೀವ್ರತರದ ರಕ್ತಸ್ರಾವವಾಗಿದ್ದು ವೈದ್ಯಾಧಿಕಾರಿಯವರು ಹೆಚ್ಚಿನ ಚಿಕಿತ್ಸೆಯ ಬಗ್ಗೆ ಕೆಎಂಸಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅದರಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋದಲ್ಲಿ ಅಲ್ಲಿಯ ವೈದ್ಯರು ನಾಗರತ್ನರನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಶೈಲೇಶ್ ಎಂಬವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

   

Related Articles

error: Content is protected !!