Home » ರಾಷ್ಟ್ರೀಯ ಮತದಾರರ ದಿನಾಚರಣೆ
 

ರಾಷ್ಟ್ರೀಯ ಮತದಾರರ ದಿನಾಚರಣೆ

ಬಿ. ಬಿ. ಹೆಗ್ಡೆ ಕಾಲೇಜು

by Kundapur Xpress
Spread the love

ಕುಂದಾಪುರ  : ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಭಾಗವಹಿಸುವಿಕೆ ಪ್ರಮುಖವಾದದ್ದು, ಆ ನಿಟ್ಟಿನಲ್ಲಿ  ದೇಶದ ಸಂವಿಧಾನ ಜನತೆಗೆ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತರಾಗಿ ಚಲಾಯಿಸಿದಾಗ ಮಾತ್ರ ಸದೃಢ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕ ಹಾಗೂ ರೋವರ್ಸ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಹೇಳಿದರು. ಅವರು ಕಾಲೇಜಿನ  ಎನ್.ಎಸ್.ಎಸ್. ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು.

ಅದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ,  ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್, ಎನ್.ಸಿ.ಸಿ. ಅಧಿಕಾರಿ ಶ್ರೀ ಹರೀಶ್ ಬಿ. ರೇಂಜರ್ಸ್ ಲೀಡರ್ ಶ್ರೀಮತಿ ಅವಿತಾ ಕೊರೆಯಾ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ ಹಾಗೂ ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿಗಳು‌ ಉಪಸ್ಥಿತರಿದ್ದರು.

   

Related Articles

error: Content is protected !!