ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ನಿರ್ಣಾಯಕ ಪಾತ್ರ ವಹಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ತಿಂಗಳ 10ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆಯಿದೆ. ಲೋಕಸಭಾ ಚುನಾವಣೆಯ ಸಿದ್ಧತೆ ಸೇರಿದಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಸ್ಥಾನಗಳ ಹಂಚಿಕೆ ಹಾಗೂ ಕೆಲವು ಹಿರಿಯ ನಾಯಕರ ಅಹವಾಲುಗಳ ಬಗ್ಗೆ ಅಮಿತ್ ಶಾ ಅವರು ರಾಜ್ಯ ನಾಯಕರೊಂದಿಗೆ ಸಮಾಲೋಚನೆ ನಡೆಸುವ ನಿರೀಕ್ಷೆ ಇದೆ ಎನ್ನಲಾಗಿದೆ