Home » ವಿಶ್ವಾಸ ಮತ ಗೆದ್ದ ಜಾರ್ಖಂಡ್ ಸಿಎಂ
 

ವಿಶ್ವಾಸ ಮತ ಗೆದ್ದ ಜಾರ್ಖಂಡ್ ಸಿಎಂ

by Kundapur Xpress
Spread the love

ರಾಂಚಿ: ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದ್ದು, ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಸೋಮವಾರ ನಡೆದ ವಿಶೇಷ ಅಧಿವೇಶನದಲ್ಲಿ ಸಿಎಂ ಚಂಪೈ ಸೊರೆನ್ ಅವರು ವಿಶ್ವಾಸ ಮತಯಾಚಿಸಿದರು. ಜೆಎಂಎಂ, ಕಾಂಗ್ರೆಸ್ ಮತ್ತು ಆರ್‌ಜೆಡಿ ಮೈತ್ರಿಕೂಟ 47 ಶಾಸಕರು ಕೈ ಎತ್ತುವ ಮೂಲಕ ಚಂಪೈ ಸರ್ಕಾರಕ್ಕೆ ಬಂಬಲ ನೀಡಿದರು. 29 ಶಾಸಕರು ವಿಶ್ವಾಸಮತದ ವಿರುದ್ಧವಾಗಿ ಕೈ ಎತ್ತಿದರು. ಇದಕ್ಕು ಮುನ್ನ ವಿಧಾನಸಭೆಯಲ್ಲಿ ಮಾತನಾಡಿದ ಬಂಧನಕ್ಕೊಳಗಾಗಿರುವ ಮಾಜಿ ಸಿಎಂ ಹೇಮಂತ್ ಸೊರೆನ್, ನನ್ನ ಬಂಧನಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ದೂಷಿಸಿದರು. ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೋರೆನ್ ಅವರನ್ನು ಜ.31 ರಂದು ಜಾರಿ ನಿರ್ದೇಶನಾಲಯ ಬಂಧಿಸಿದ್ದು ಈಗ ಇಡಿ ಕನ್ನಡಿಯಲ್ಲಿದ್ದಾರೆ. ವಿಶ್ವಾಸ ಮತಕ್ಕಾಗಿ ವಿಧಾನಸಭೆಯಲ್ಲಿ ಹಾಜರಾಗಲು ಇಡಿ ಮಾಜಿ ಸಿಎಂ ಅವಕಾಶ ನೀಡಿತ್ತು

   

Related Articles

error: Content is protected !!