ನವದೆಹಲಿ : ಲೋಕಸಭೆಗೆ ಇದೀಗ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 366 ಸ್ಥಾನಗಳನ್ನು ಗೆಲ್ಲುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಯಾವುದೇ ಮ್ಯಾಜಿಕ್ ಮಾಡುವ ಸಾಧ್ಯತೆ ಇಲ್ಲ ಅದು ಕೇವಲ 104 ಸ್ಥಾನ ಗೆಲ್ಲಬಹುದು. ಇತರರು 73 ಗೆಲ್ಲಬಹುದು ಎಂದು ಸಮೀಕ್ಷಾ ವರದಿಯೊಂದು ಹೇಳಿದೆ.
ಮುಂದಿನ ಮೇ ತಿಂಗಳಲ್ಲಿ ನಡೆಯಬೇಕಿರುವ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಟೈಮ್ಸ್ ನೌ ಮತ್ತು ಮ್ಯಾಟ್ರಿಜ್ ಸಮೀಕ್ಷೆ ನಡೆಸಿ ವರದಿಯೊಂದನ್ನು ಬಿಡುಗಡೆ ಮಾಡಿದೆ.
ಸಮೀಕ್ಷೆ ಅನ್ವಯ ಕರ್ನಾಟಕದಲ್ಲಿ ಬಿಜೆಪಿ 21 ಸ್ಥಾನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಇನ್ನು ಆಡಳಿತಾರೂಢ ಕಾಂಗ್ರೆಸ್ 5 ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಗಿ ಬಂದರೆ, ಬಿಜೆಪಿ ಜೊತೆ ಮೈತ್ರಿ ಘೋಷಿಸಿರುವ ಜೆಡಿಎಸ್ 2 ಸ್ಥಾನ ಗೆಲ್ಲಲಿದೆ. 2019ರ ಚುನಾವಣೆಯಲ್ಲಿ ಬಿಜೆಪಿ 25, ಕಾಂಗ್ರೆಸ್, ಜೆಡಿಎಸ್, ಪಕ್ಷೇತರರು ತಲಾ 1 ಸ್ಥಾನ ಗೆದ್ದಿದ್ದರು