ದಾವಣಗೆರೆ : ಕೇಂದ್ರದ ತೆರಿಗೆ ಹಣದ ವಿಚಾರವಾಗಿ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಸತ್ಯಾವಾದ ವಿಚಾರ ಒಂದು ವೇಳೆ ನಾನು ಹೇಳಿದ ಹೇಳಿಕೆಗಳೆಲ್ಲಾ ಸುಳ್ಳೆಂದು ನಿರೂಪಿಸಿದರೆ ರಾಜಕೀಯವನ್ನೇ ಬಿಟ್ಟು ಬಿಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ.
ಹರಿಹರ ತಾಲೂಕು ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ಶುಕ್ರವಾರ ವಾಲ್ಮೀಕಿ ಜಾತ್ರೆಗೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ತೆರಿಗೆ ವಿಚಾರದಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಅನ್ಯಾಯವಾಗಿರುವ ಬಗ್ಗೆ ನಾನು ಹೇಳಿರುವುದು ಸತ್ಯ ಸಂಗತಿ. ಒಂದು ವೇಳೆ ನನ್ನ ಮಾತು ಸುಳ್ಳಾದರೆ ರಾಜಕೀಯವನ್ನೇ ಬಿಟ್ಟು ಬಿಡ್ತೀನಿ ಎಂದರು.