ನವದೆಹಲಿ: ಅಯೋಧ್ಯೆಯಲ್ಲಿ ನಿರ್ಮಾಣ ಮಾಡಲಾಗಿರುವ ರಾಮಮಂದಿರ ಒಂದು ಐತಿಹಾಸಿಕ ಸಾಧನೆ ಎಂದು ಹೇಳುವ ಗೊತ್ತುವಳಿಯನ್ನು ಸ್ಪೀಕರ್ ಓಂ ಬಿರ್ಲಾ ಲೋಕಸಭೆಯಲ್ಲಿ ಮಂಡಿಸಿದ್ದು. ಇದನ್ನು ಅಂಗೀಕರಿಸಲಾಗಿದೆ. ರಾಮಮಂದಿರದ ಕುರಿತಾಗಿ ಸುಮಾರು 4 ಗಂಟೆಗಳ ಕಾಲ ಲೋಕಸಭೆಯಲ್ಲಿ ಚರ್ಚೆ ನಡೆಯಿತು. ಬಳಿಕ ಈ ಗೊತ್ತುವಳಿಯನ್ನು ಮಂಡಿಸಿ ಒಪ್ಪಿಗೆ ಪಡೆಯಲಾಯಿತು. ಈ ವೇಳೆ ರಾಮಮಂದಿರ ನಿರ್ಮಾಣ ಮತ್ತು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯನ್ನು ಐತಿಹಾಸಿಕ ಸಾಧನೆ ಎಂದು ಸ್ಪೀಕರ್ ಓಂ ಬಿರ್ಲಾ ಅವರು ಬಣ್ಣಿಸಿದರು