ಮುಂಬೈ : ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು ಹಿರಿಯ ನಾಯಕ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಕಾಂಗ್ರೇಸಿನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಇಂದು ಅವರು ಸ್ಪೀಕರ್ ರವರನ್ನು ಮುಂಬೈನಲ್ಲಿ ಭೇಟಿಯಾಗಿ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು ಅವರು ಬಿಜೆಪಿ ಸೇರುವ ಬಗ್ಗೆ ವೂಹಾಪೋಹ ಹುಟ್ಟಿಕೊಂಡಿದ್ದು ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ