ಉಡುಪಿ : ಭಾರತ ಸರಕಾರದ ನಿವೃತ್ತ ನೌಕರರ ಬಹುದಿನದ ಬೇಡಿಕೆಯಾದ ಸೆಂಟ್ರಲ್ ಗವರ್ನ್‌ಮೆಂಟ್ ಹೆಲ್ತ್ ಸ್ಕೀಮ್ (CGHS) ವೆಲ್ನೆಸ್ ಸೆಂಟರ್ ಅನ್ನು ಉಡುಪಿಯಲ್ಲಿ ತೆರೆಯಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಅನುಮೋದನೆ ನೀಡಿದೆ.
ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಆಹಾರ ಸಂಸ್ಕರಣಾ ಉದ್ಯಮಗಳ ರಾಜ್ಯ ಖಾತೆ ಸಚಿವರೂ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಅವರ ಪ್ರಯತ್ನದಿಂದ ಬಹುದಿನದ ಬೇಡಿಕೆ ಈಡೇರಿದ್ದು, ಫೆಬ್ರವರಿ 2023ರಲ್ಲಿ ಕೇಂದ್ರ ಆರೋಗ್ಯ ಸಚಿವರಿಗೆ ಭೇಟಿಯಾಗಿ ಉಡುಪಿಯಲ್ಲಿ CGHS ವೆಲ್ನೆಸ್ ಸೆಂಟರ್ ಅನ್ನು ತೆರೆಯುವಂತೆ ಮನವಿ ಮಾಡಿದ್ದರು. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಮನ್‌ಸುಖ್ ಮಾಂಡವಿಯಾ ಅವರು ಶೋಭಾ ಕರಂದ್ಲಾಜೆ ಅವರಿಗೆ ಪತ್ರ ಬರೆದು ಉಡುಪಿ ಸೇರಿದಂತೆ ದೇಶದ 20 ನಗರಗಳಲ್ಲಿ CGHS ವೆಲ್ನೆಸ್ ಸೆಂಟರ್‌ಗಳನ್ನು ತೆರೆಯುತ್ತಿರುವುದಾಗಿ ತಿಳಿಸಿದ್ದಾರೆ.
ಉಡುಪಿ ಹಾಗೂ ನೆರೆಯ ಜಿಲ್ಲೆಗಳಲ್ಲಿ 46ಕ್ಕೂ ಅಧಿಕ ಕೇಂದ್ರ ಸರಕಾರದ ಇಲಾಖೆಗಳ ಸುಮಾರು 4500 ಉದ್ಯೋಗಿಗಳಿದ್ದು 9000ಕ್ಕೂ ಅಧಿಕ ನಿವೃತ್ತ ಕೇಂದ್ರ ಸರಕಾರದ ಉದ್ಯೋಗಿಗಳಿದ್ದಾರೆ. ಉಡುಪಿಯಲ್ಲಿ ಈ ಕೇಂದ್ರ ಪ್ರಾರಂಭವಾಗುವುದರಿಂದ ಅವರು ನಿಯಮಾನುಸಾರ ವೈದ್ಯಕೀಯ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ. ತಮ್ಮ ಮನವಿಯನ್ನು ಪುರಸ್ಕರಿಸಿ ಉಡುಪಿಗೆ CGHS ವೆಲ್ನೆಸ್ ಸೆಂಟರ್ ಅನ್ನು ಮಂಜೂರು ಮಾಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಮನ್‌ಸುಖ್ ಮಾಂಡವಿಯಾರವರಿಗೆ ಸಚಿವರು ಕೃತಜ್ಞತೆ ಸಲ್ಲಿಸಿದ್ದಾರೆ.