Home » ದೇವೆಗೌಡರು ಆಸ್ಪತ್ರೆಗೆ ದಾಖಲು
 

ದೇವೆಗೌಡರು ಆಸ್ಪತ್ರೆಗೆ ದಾಖಲು

by Kundapur Xpress
Spread the love

ಬೆಂಗಳೂರು : ಅನಾರೋಗ್ಯ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್ .ಡಿ.ದೇವೇಗೌಡ ಅವರು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೊಳಗಾಗಿದ್ದಾರೆ. ಇತ್ತೀಚೆಗೆ ದೇವೇಗೌಡ ಅವರು ಹೆಚ್ಚಾಗಿ ಓಡಾಟ ನಡೆಸಿದ್ದರಿಂದ ದೇಹ ದಣಿವಾಗಿದೆ. ಅಲ್ಲದೇ, ವಯೋಸಹಜ ಸಮಸ್ಯೆಯಿಂದಾಗಿ ಅನಾರೋಗ್ಯಕ್ಕೊಳಗಾಗಿದ್ದಾರೆ. ದೈಹಿಕವಾಗಿ ತೀವ್ರ ಆಯಾಸಗೊಂಡಿದ್ದರಿಂದ ಮಣಿಪಾಲ್ ‘ ಆಸತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅಗತ್ಯ ಚಿಕಿತ್ಸೆ ನೀಡಿದ್ದಾರೆ. ಶುಕ್ರವಾರ ಅಥವಾ ಶನಿವಾರ ಆಸ್ಪತ್ರೆಯಿಂದ ಡಿಸ್ಟಾರ್ಚ್ ಮಾಡುವ ಸಾಧ್ಯತೆ ಇದೆ. ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಈ ನಡುವೆ, ಮಾಧ್ಯಮಗಳಲ್ಲಿ ಆರೋಗ್ಯದ ಬಗ್ಗೆ ಇಲ್ಲದ ವದಂತಿ ಹಬ್ಬಿದ್ದ ಹಿನ್ನೆಲೆಯಲ್ಲಿ ದೇವೇಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. `ನನ್ನ ಆರೋಗ್ಯದ ಕುರಿತು ಕೆಲವು ಉತ್ತೇಕ್ಷಿತ ವರದಿಗಳು ಬಿತ್ತರಗೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಆದರೆ ನಾನು ಸಹಜ ತಪಾಸಣೆಗಾಗಿ ಆಸ್ಪತ್ರೆಗೆ ತರಳಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದಿದ್ದಾರೆ

   

Related Articles

error: Content is protected !!