ಕುಂದಾಪುರ: ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಸಮಾರಂಭವು ಫೆಬ್ರವರಿ 15ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಲ್ತೊಡು ಇಲ್ಲಿ ನೆರವೇರಿತು. ಎನ್.ಎಸ್ ಗ್ರೂಪ್ ಮತ್ತು ಯುವ ಮನೀಷ್ ಇದರ ಮಾಲಕರಾದ ಜಯಶೀಲ ಶೆಟ್ಟಿ, ಶಿಬಿರವನ್ನು ಉದ್ಘಾಟಿಸಿ ಶಿಬಿರದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಶಿಬಿರಕ್ಕೆ ಶುಭಹಾರೈಸಿದರು
ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರು ಕಾಲ್ತೊಡು ಗ್ರಾಮಪಂಚಾಯತ್ ವತಿಯಿಂದ ಶಾಲೆಗೆ ನೀಡಿದ ಕುಡಿಯುವ ನೀರಿನ ಫಿಲ್ಟರ್ ನ್ನು ಉದ್ಘಾಟಿಸಿದರು. ಕಾಲ್ತೊಡು ಶಾಲೆಯ ವಿದ್ಯಾರ್ಥಿಗಳಿಗೆ ವಾಹನದ ಸೌಲಭ್ಯಕ್ಕಾಗಿ ಜಯಶೀಲ ಶೆಟ್ಟಿ ಅವರಿಗೆ ಮುಖ್ಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಮನವಿಯನ್ನು ಸಲ್ಲಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಇವರು ಏನ್ ಎಸ್ ಎಸ್ ಶಿಬಿರದ ಧ್ಯೇಯೋದ್ದೇಶಗಳನ್ನು ತಿಳಿಸಿ ಶಿಬಿರವನ್ನು ಸದುಪಯೋಗ ಪಡಿಸಿಕೊಳ್ಳುವoತೆ ಹೇಳಿದರು