ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ದೇವಸ್ಥಾನದ ವಠಾರದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರು, ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡಿ ಪಕ್ಷ ಬೇದವನ್ನು ಮರೆತು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರು, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ, ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಕುಯಿಲಾಡಿ ಸುರೇಶ್ ನಾಯಕ್, ಮಟ್ಟಾರು ರತ್ನಾಕರ ಹೆಗ್ಡೆ, ಸುರೇಶ್ ಸೇರ್ವೇಗಾರ್, ಜಯಾನಂದ ಹೆಗ್ಡೆ, ಸುಧಾಕರ ಶೆಟ್ಟಿ, ಸುಭಾಸ್ ಹೆಗ್ಡೆ, ಶುಂಭು ಶೆಟ್ಟಿ, ದೇವು ಪೂಜಾರಿ, ಉಡುಪಿ ತಹಶೀಲ್ದಾರರಾದ ಗುರುರಾಜ್, ಅನಂತಪದ್ಮನಾಭ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹಾಗೂ ಜೀರ್ಣೋದ್ಧಾರ ಸಮಿತಿಯ ಕೋಶಾಧಿಕಾರಿಗಳಾದ ರಾಜಗೋಪಾಲ ಉಪಾಧ್ಯಾಯ ಮತ್ತು ಪ್ರಮುಖರು, ಸ್ಥಳೀಯರು ಉಪಸ್ಥಿತರಿದ್ದರು.