Home » 55.65 ಲಕ್ಷ ರೂಪಾಯಿ ಮೊತ್ತದ ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡ
 

55.65 ಲಕ್ಷ ರೂಪಾಯಿ ಮೊತ್ತದ ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡ

by Kundapur Xpress
Spread the love

ಪಡುಬಿದ್ರಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 55.65 ಲಕ್ಷ ರೂಪಾಯಿ ಅನುದಾನದಲ್ಲಿ ನಿರ್ಮಾಣವಾಗಿರುವ “ಪಡುಬಿದ್ರಿ ಉಪ ಅಂಚೆ ಕಚೇರಿ ನೂತನ ಕಟ್ಟಡ”ದ ಉದ್ಘಾಟನೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿದರು.

ಶಾಸಕರು ಮಾತನಾಡಿ ಅಂಚೆ ಇಲಾಖೆ ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ನೀಡುತ್ತಾ ಬಂದಿದೆ. ಪಡುಬಿದ್ರಿ ಉಪ ಅಂಚೆ ಕಚೇರಿ ಜನಸಾಮಾನ್ಯರ ಕಚೇರಿಯಾಗಲಿ ಎಂದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶಶಿಕಲಾ, ದಕ್ಷಿಣ ಕರ್ನಾಟಕ ವಲಯ ಅಂಚೆ ಸೇವೆಗಳ ಟಿ.ಎಸ್ ಅಶ್ವತ್ಥನಾರಾಯಣ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

   

Related Articles

error: Content is protected !!