Home » ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು
 

ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು

ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

by Kundapur Xpress
Spread the love

ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದರು. ಶಿಕಾರಿಪುರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಘೋಷಣೆ ಕೂಗಿದವನನ್ನು ಅಲ್ಲೇ ಒದ್ದು, ಒಳಗೆ ಹಾಕುತ್ತಿದ್ದರು. ಘೋಷಣೆ ಕೂಗಿದ ಜಾಗದಲ್ಲೇ ಅಷ್ಟೊಂದು ಕ್ಯಾಮರಾಗಳಿವೆ. ಯಾರು ಕೂಗಿದ್ದಾರೆ ಎಂದು ಟಿವಿ ಮಾಧ್ಯಮಗಳು ದೃಶ್ಯಾವಳಿಗಳ ಸಹಿತ ಸುದ್ದಿ ಬಿತ್ತರಿಸಿವೆ. ಇದರಲ್ಲಿ ತನಿಖೆ ಮಾಡುವುದು ಏನಿದೆ ಎಂದು ಪ್ರಶ್ನಿಸಿದರು. ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹೋರಾಟಕ್ಕೆ ಇಳಿಯಬೇಕಾ? ದೇಶದ್ರೋಹಿಗಳನ್ನು ಹಿಡಿಯಿರಿ ಅಂದ್ರೆ, ದೇಶದ್ರೋಹಿಗಳ ವಿರುದ್ಧ ದನಿ ಎತ್ತಿದವರ ವಿರುದ್ಧ ಕ್ರಮ ತೆಗೆದು ಕೊಳ್ತಿರಾ? 5 ಗ್ಯಾರಂಟಿಗಳ ಜೊತೆ ದೇಶದ್ರೋಹಿಗಳನ್ನು ರಕ್ಷಿಸುವ 6ನೇ ಗ್ಯಾರಂಟಿ ಸೇರಿಸಿಕೊಂಡಿದ್ದಾರೆ. ತಪ್ಪಿತಸ್ಥರನ್ನು ನಿರಪರಾಧಿ ಎಂದು ಹೇಳುತ್ತಿರುವುದು ಖಂಡನೀಯ ಎಂದು ಹರಿಹಾಯ್ದರು

   

Related Articles

error: Content is protected !!