ಕುಂದಾಪುರ : ರಾಜ್ಯದ 28 ಲೋಕಸಭಾ ಕ್ಷೇತ್ರಗಳನ್ನು ಶತಾಯ ಗತಾಯ ಗೆಲ್ಲಲೇಬೇಕೆಂಬ ಉದ್ದೇಶದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಟೀಮ್ ಪ್ರತಿ ಕ್ಷೇತ್ರದ ಸಮೀಕ್ಷೆ ನಡೆಸಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಲು ಸಜ್ಜಾಗಿದ್ದಾರೆ
ಉನ್ನತ ಮೂಲಗಳ ಪ್ರಕಾರ ಹುಬ್ಬಳ್ಳಿ – ಧಾರವಾಡ ಕ್ಷೇತ್ರದಿಂದ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಕೆಲವು ಹಾಲಿ ಸಂಸದರನ್ನು ಚುನಾವಣಾ ಕಣದಿಂದ ಹೊರಗಿಟ್ಟು ನಾಮ ನಿರ್ದೇಶನ ಮಾಡಲು ತೀರ್ಮಾನಿಸಲಾಗಿದ್ದು ತುಮಕೂರು ಕ್ಷೇತ್ರದಿಂದ ಮಾಜಿ ಸಚಿವ ವಿ ಸೋಮಣ್ಣ ಮತ್ತು ಬೆಳಗಾವಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿದೆ
ಅಚ್ಚರಿಯ ಬೆಳವಣಿಗೆಯಲ್ಲಿ ಕೆಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಟಿಕೆಟ್ ನೀಡಲು ಹೆಚ್ಚಿನ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಹೊಸ ಮುಖವನ್ನು ಪರಿಚಯಿಸಲಾಗುತ್ತಿದ್ದು ಬಹುತೇಕ ಕಿದಿಯೂರು ಉದಯ್ ಕುಮಾರ್ ಶೆಟ್ಟಿ ಅವರನ್ನು ಅಭ್ಯರ್ಥಿ ಮಾಡುವಂತೆ ಹಲವು ಪದಾಧಿಕಾರಿಗಳು ಈಗಾಗಲೇ ಮನವಿಯನ್ನು ಸಲ್ಲಿಸಿದ್ದಾರೆ