ಕಾಪು : ಕಾಪು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಪು – ಶಿರ್ವ ಮುಖ್ಯ ರಸ್ತೆ ಆಗಲೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ರೂ. 5 ಕೋಟಿ 75 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪ್ರಗತಿಯಲ್ಲಿದ್ದು, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು
ಈ ಸಂದರ್ಭದಲ್ಲಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ, ಉಪಾಧ್ಯಕ್ಷರಾದ ಭಾರತಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರರಾದ ಸುಧೀರ್, ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ, ಲತಾ ಆಚಾರ್ಯ, ಸಂಪತ್ ಕುಮಾರ್, ಯಾಗ್ನಸ್ ಮಥಾಯಸ್, ಗಣೇಶ್ ಶೆಟ್ಟಿ ಪೈಯಾರು, ಯವಜಿನ್ ಲೋಬೋ, ಮಾಜಿ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಗುರ್ಮೆ, ಗುತ್ತಿಗೆದಾರರಾದ ಕಿಶೋರ್ ಗುರ್ಮೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು