ನವದೆಹಲಿ : ಲೋಕಸಭೆ ಚುನಾವಣೆಯ ಮೊದಲ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಮಾರ್ಚ್ 8ರಂದು ಮತ್ತೊಂದು ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬುಧವಾರ ಕರ್ನಾಟಕ, ಒಡಿಶಾ, ಅಂಧ್ರಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಕೇರಳ ರಾಜ್ಯಗಳ ಪಕ್ಷದ ಹಿರಿಯ ಮುಖಂಡರೊಂದಿಗೆ ಬಿಜೆಪಿ ರಾಷ್ಟ್ರೀಯ ವರಿಷ್ಠರು ಹಂತ ಹಂತವಾಗಿ ಸಭೆ ನಡೆಸಿದ್ದಾರೆ.
ಕರ್ನಾಟಕದ 28 ಕ್ಷೇತ್ರಗಳ ಪೈಕಿ ಕೆಲವು ಸ್ಥಾನಗಳಿಗೆ ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಸಂಘಟನಾ ಕಾರ್ಯದರ್ಶಿ ರಾಜೇಶ್, ಮಾಜಿ ಸಿಎಂಗಳಾದ ಬಿ.ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಪಕ್ಷದ ಮುಖಂಡರಾದ ಆರ್. ಅಶೋಕ್, ಕೋಟಾ ಶ್ರೀನಿವಾಸ ಪೂಜಾರಿ, ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಜತೆಗೆ ವರಿಷ್ಠರು ಸಭೆ ನಡೆಸಿ, ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚಿಸಿದ್ದಾರೆ