ತೆಕ್ಕಟ್ಟೆ : ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್ ತೆಕ್ಕಟ್ಟೆಯಲ್ಲಿ ಕೋಡಿಂಗ್ ಮತ್ತು ರೊಬೊಟಿಕ್ಸ್ ತತ್ವದ ಆಧಾರದಲ್ಲಿ ತಯಾರಿಸಿದ ಎಲೆಕ್ಟ್ರಾನಿಕ್ ವಿಜ್ಷಾನ ಮಾದರಿಗಳ ಪ್ರದರ್ಶನವನ್ನು ಏರ್ಪಡಿಸಲಾಯಿತು. ಐದನೇ ತರಗತಿಯಿಂದ ಒಂಭತ್ತನೇ ತರಗತಿಯ ವಿದ್ಯಾರ್ಥಿಗಳು ಒಟ್ಟು 40 ವಿಜ್ಞಾನ ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು
. ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್ ಎಮ್ ಪ್ರಭಾಕರ ಶೆಟ್ಟಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ಸಂಶೋಧನಾ ಮನೋಭಾವವನ್ನು ಪ್ರಶಂಸಿಸಿದರು. ಶಿಕ್ಷಕ ಹಾಗೂ ಪೋಷಕರ ಸಹಕಾರದಿಂದ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಬಹುದು ಎಂದು ತಿಳಿಸಿದರು. ಶಾಲಾ ಪ್ರಾಂಶುಪಾಲ ನಿತಿನ್ ಡಿ’ ಆಲ್ಮೇಡಾ ಮಾತನಾಡಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೋಡಿಂಗ್ ಹಾಗೂ ರೊಬೊಟಿಕ್ಸ್ ತಂತ್ರಜ್ಞಾನದ ಕಲಿಕೆ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.