ಅವಕಾಶದ ಸದ್ಬಳಕೆ, ಯಶಸ್ವಿಗೆ ಕಾರಣ
ಕುಂದಾಪುರ: ಯುವಜನಾಂಗ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಧೈರ್ಯದಿಂದ ಮುನ್ನುಗ್ಗಬೇಕು. ಆಗ ಯಶಸ್ಸು ನಿಶ್ಚಿತ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ನುಡಿದರು. ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಆರ್. ಎನ್. ಶೆಟ್ಟಿ ಸಭಾಭನದಲ್ಲಿ ಕರ್ನಾಟಕ ಜಾನಪದ ಪರಿಷತ್ ಉಡುಪಿ, ಭಂಡಾರ್ಕಾರ್ಸ್ ಕಾಲೇಜು, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಕುಂದಪ್ರಭ ಸಂಸ್ಥೆ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಸಮಾಜದ ಬೆಳವಣಿಗೆಯಲ್ಲಿ ಯುವ ಜನಾಂಗದ ಪಾತ್ರ ಎಂಬ ವಿಷಯದ ಕುರಿತಾಗಿ ವಿಚಾರ ಸಂಕಿರಣ ಮತ್ತು ಜಾನಪದ ವೈವಿಧ್ಯ ಉದ್ಘಾಟಿಸಿ ಅವರು ಮಾತನಾಡಿದರು.
ಕನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ. ತಲ್ಲೂರು ನಾರಾಯಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಜಿಲ್ಲಾ ಗವರ್ನರ್ ಡಾ. ಎಂ. ಕೆ. ಭಟ್ ಜಾನಪದ ವೈವಿಧ್ಯಕ್ಕೆ ಚಾಲನೆ ನೀಡಿದರು. ಭಂಡಾರ್ಕಾರ್ಸ್ ಕಾಲೇಜು ಪ್ರಿನ್ಸಿಪಾಲ್ ಡಾ. ಎನ್. ಪಿ. ನಾರಾಯಣ ಶೆಟ್ಟಿ ಉಡುಪಿ ಜಿಲ್ಲಾ ಜಾನಪದ ಪರಿಷತ್ ಉಪಾಧ್ಯಕ್ಷ ರಾಜೀವ ಕೋಟ್ಯಾನ್ ಉಪಸ್ಥಿತರಿದ್ದರು.
ಕುಂದಪ್ರಭ ಸಂಪಾದಕ ಯು. ಎಸ್. ಶೆಣೈ ಆಶಯ ನುಡಿಗಳನ್ನಾಡಿದರು. ಕೆ. ಎನ್. ಅಶೋಕ ಆಚಾರ್ಯ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.