ನವದೆಹಲಿ : ಸಮಾಜಸೇವಕಿ, ಲೇಖಕಿ ಹಾಗೂ ಹೆಮ್ಮೆಯ ಕನ್ನಡತಿ ಡಾ| ಸುಧಾಮೂರ್ತಿ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ. ಸರ್ಕಾರದ ಪ್ರಸ್ತಾವಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಒಪ್ಪಿಗೆ ನೀಡಿದ್ದಾರೆ. ಮಹಿಳಾ ದಿನದಂದು ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸಿದ್ದಾರೆ.
ಈಗಾಗಲೇ ಕರ್ನಾಟಕದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ.ಇದೀಗ ಮತ್ತೊಬ್ಬ ಕನ್ನಡತಿಗೆ ಆ ಗೌರವ ಹುಡುಕಿಕೊಂಡು ಬಂದಿದೆ.
ಬೆಂಗಳೂರು ಮೂಲದ ಇನ್ಫೋಸಿಸ್ ಕಂಪನಿಯ ಸಂಸ್ಥಾಪಕ .ನಾರಾಯಣಮೂರ್ತಿ ಅವರಪತ್ನಿಯಾಗಿರುವ ಸುಧಾ ಅವರು ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆಯಾಗಿ ಹಲವು ಜನೋಪಯೋಗಿ ಕೆಲಸಗಳನ್ನು ಮಾಡಿದ್ದಾರೆ