ಬೆಂಗಳೂರು :ಸರ್ಕಾರ ಮತ್ತು ಖಾಸಗಿ ಶಾಲಾ ಸಂಘಟನೆಗಳ ನಡುವೆ ಮುಂದುವರೆದ ಕಾನೂನಿನ ಹೋರಾಟ, ಮಕ್ಕಳಲ್ಲಿ ಗೊಂದಲದ ನಡುವೆಯೇ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಇಂದು ಸೋಮವಾರದಿಂದ ಮಂಡಳಿ ಪರೀಕ್ಷೆಗಳು ಆರಂಭವಾಗಲಿವೆ. ಸರ್ಕಾರ ಸಿದ್ದಪಡಿಸಿರುವ ಪ್ರಶ್ನೆ ಪತ್ರಿಕೆಗೆ ಆಯಾ ಶಾಲೆಗಳಲ್ಲೇ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಸೇರಿ ಒಟ್ಟು 69,137 ಶಾಲೆಗಳಿಂದ 28.14 ಲಕ್ಷ ವಿದ್ಯಾರ್ಥಿಗಳಿಗೆ ಮಾ.18ರವರೆಗೆ ಮೌಲ್ಯಾಂಕನ ಪರೀಕ್ಷೆಗಳು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಂಡಿರುವುದಾಗಿ ತಿಳಿಸಿದೆ.