ಕುಂದಾಪುರ :ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಂಗಳವಾರ ಕೊಲ್ಲೂರು ಶ್ರೀ ಮೂಕಾಂಬಿಕ ದೇವಳಕ್ಕೆ ಭೇಟಿ ನೀಡಿ ಮಗನಿಗೆ ಲೋಕಸಭೆ ಟಿಕೇಟು ಸಿಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದರು. ಮೊದಲು ಕುಟುಂಬ ಸಮೇತರಾಗಿ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ವೀರಭದ್ರ ದೇವರಿಗೆ ಕಾಯಿ ಸಮರ್ಪಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪ, ನಾನು ಯಾವಾಗಲೂ ಕೊಲ್ಲೂರಿಗೆ ಆಗಮಿಸಿ ತಾಯಿಯ ದರ್ಶನ ಪಡೆಯುತ್ತಿರುತ್ತೇನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನನ್ನ ಮಗ ಕಾಂತೇಶ್ ಹಾವೇರಿಯಿಂದ ಸ್ಪರ್ಧೆ ಮಾಡಬೇಕು ಎಂದು ಬಯಸಿದ್ದಾನೆ. ಮೂಕಾಂಬಿಕೆಯ ಬಳಿಬೇಡಿಕೊಂಡಿದ್ದು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಪ್ರಾರ್ಥಿಸಿದ್ದೇನೆ. ಕಾಂತೇಶ್ ಗೆ ಟಿಕೆಟ್ ಸಿಗುತ್ತದೆ, ಆತ ಗೆಲ್ಲುತ್ತಾನೆ ಎಂಬ ವಿಶ್ವಾಸವಿದೆ ಎಂದರು.