ಉಡುಪಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾದ ಪಾಂಡುರಂಗ ಶಾನಭಾಗ್ ಅವರು ಅಯೋಧ್ಯೆಯಲ್ಲಿ ರಾಮಲಲ್ಲಾನ ದರ್ಶನ ಪಡೆದು ಹಿಂತಿರುಗುತ್ತಿದ್ದಾಗ ಪ್ರವೇಶ ದ್ವಾರದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಇವರ ಮನೆಗೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವಿಸ್ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ ಶ್ರದ್ಧಾಂಜಲಿ ಅರ್ಪಿಸಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು.