Home » ಮಮತಾ ತಲೆಗೆ ತೀವ್ರ ಪೆಟ್ಟು
 

ಮಮತಾ ತಲೆಗೆ ತೀವ್ರ ಪೆಟ್ಟು

by Kundapur Xpress
Spread the love

ಕೋಲ್ಕತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಮನೆಯಲ್ಲಿ ನಡೆದಾಡುವಾಗ ಜಾರಿ ಬಿದ್ದಿದ್ದು, ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದೆ. ಅವರ ತಲೆಯಿಂದ ರಕ್ತಸ್ರಾವವಾಗುತ್ತಿರುವ ದೃಶ್ಯವನ್ನು ತೃಣಮೂಲ ಕಾಂಗ್ರೆಸ್ ಪಕ್ಷ ಟ್ವಿಟ್ ಮಾಡಿದೆ. ‘

ಆಕೆ ತಮ್ಮ ಮನೆಯಲ್ಲಿ ನಡೆದು ಹೋಗುವಾಗ ಆಯತಪ್ಪಿ ಬಿದ್ದು ತಲೆಗೆ ತೀವ್ರ ಪೆಟ್ಟು ಮಾಡಿಕೊಂಡಿದ್ದಾರೆ. ಬಳಿಕ ಅವರನ್ನು ಮನೆಯಲ್ಲಿದ್ದ ಬಂಧುಗಳು ನಗರದ ಎಸ್ಎಸ್ ಕೆಎಂ ಆಸ್ಪತ್ರೆಗೆ ದಾಖಲಿಸಿದರು. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ಹಣೆಗೆ ಚಿಕಿತ್ಸೆ ನೀಡಿ ಬ್ಯಾಂಡೇಜ್ ಹಾಕಿ ರಾತ್ರಿ ಮನೆಗೆ ಡಿಸ್‌ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

   

Related Articles

error: Content is protected !!