ಕುಂದಾಪುರ: ಕಾಂಗ್ರೆಸ್ ಮುಖಂಡ, ಸಮಾಜಸೇವಕ, ಹೇರಿಕುದ್ರು ನಿವಾಸಿ ಗಂಗಾಧರ ಶೆಟ್ಟಿ (62 ವರ್ಷ) ಯವರು ನಿನ್ನೆ ರಾತ್ರಿ ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು
ಮೂರು ದಿನಗಳ ಹಿಂದೆ ಪಕ್ಷದ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿಸಿಕೊಂಡಿದ್ದ ವೇಳೆ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿವೃತ್ತ ಮುಖ್ಯ ಶಿಕ್ಷಕ ಆನಂದ ಶೆಟ್ಟಿ ಅವರ ಪುತ್ರರಾಗಿರುವ ಇವರು ಅವಿವಾಹಿತರಾಗಿದ್ದರು. ತನ್ನ ಇಡೀ ಜೀವನವನ್ನು ಸಮಾಜಸೇವೆಗೆ ಸಮರ್ಪಣೆ ಮಾಡಿಕೊಂಡಿದ್ದರು.
ಆನಗಳ್ಳಿ ಗ್ರಾಮೀಣ ಕಾಂಗ್ರೆಸ್, ಆನಗಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪಕ್ಷಾತೀತವಾಗಿ ಎಲ್ಲರಿಂದಲೂ ಗೌರವಿಸಲ್ಪಡುತ್ತಿದ್ದ ಸರಳ ಸಜ್ಜನಿಕೆಯ ವ್ಯಕ್ತಿತ್ವ ಅವರದ್ದಾಗಿತ್ತು. ಅವರು ತಂದೆ, ಸಹೋದರ, ಸಹೋದರಿಯವರನ್ನು ಅಗಲಿದ್ದಾರೆ