ಕಾಪು : ಕುತ್ಯಾರು ಶಕ್ತಿ ಕೇಂದ್ರದ ಸಭೆ ದುರ್ಗಾ ಮಂದಿರದ ಬಳಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಕೆಲ ದಿನಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ತಳಮಟ್ಟದಲ್ಲಿ ಪಕ್ಷವನ್ನು ಸಂಘಟಿಸಬೇಕು ಹಾಗೂ ಕೇಂದ್ರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮತದಾರರಿಗೆ ಮನದಟ್ಟು ಮಾಡಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸರಳ ಸಜ್ಜನಿಕೆಯ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಲು ಶ್ರಮಿಸೋಣ ಎಂದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಕಾಪು ಉಸ್ತುವಾರಿಗಳಾದ ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ಶಿರ್ವ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಸಂದೀಪ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಸುಶಾಂತ್ ಶೆಟ್ಟಿ, ಕುತ್ಯಾರು ಶಕ್ತಿ ಕೇಂದ್ರದ ಸಂಚಾಲಕರಾದ ಗಣೇಶ್ ಶೆಟ್ಟಿ ಪೈಯಾರು, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಆಚಾರ್ಯ ಮತ್ತು ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.