ಮಂಗಳೂರು :ರಾಷ್ಟ್ರೀಯ ಹೆದ್ದಾರಿ 76ರ ನಂತೂರಿನಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿಯ ಡಿವೈಡರ್ಗೆ ಡಿಕ್ಕಿ ಹೊಡೆದು ಅಪ್ಪಚ್ಚಿಯಾದ ಭೀಕರ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ತೊಕ್ಕೊಟ್ಟಿನ ಬಿಜೆಪಿ ಹಿರಿಯ ನಾಯಕಿ ಲಲಿತಾ ಸುಂದರ್ ಅವರ ಮೊಮ್ಮಗ ಬಲಿಯಾಗಿದ್ದಾನೆ.
ಲಲಿತಾ ಸುಂದರ್ ಅವರ ಮೊಮ್ಮಗ ಶಮಿತ್ ಶೆಟ್ಟಿ(29) ಯಾನೆ ಬಂಟಿ ಸಾವಿಗೀಡಾದ ದುರ್ದೈವಿ ಯುವಕ, ಶಮಿತ್ ಶುಕ್ರವಾರ ರಾತ್ರಿ ಮಂಗಳೂರಿನ ಸ್ನೇಹಿತನ ಮನೆಯಲ್ಲಿ ನಡೆದಿದ್ದ ದೈವದ ಕೋಲದಲ್ಲಿ ಭಾಗವಹಿಸಿ ತೊಕ್ಕೊಟ್ಟಿನ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಶಮಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಡಿಕ್ಕಿಯಾದ ರಭಸಕ್ಕೆ ಡಿವೈಡರ್ಮೇಲೆ ಹಾಕಿದ್ದ ಕಬ್ಬಿಣದ ತಡೆಬೇಲಿ ಮುರಿದು ಹೋಗಿದೆ. ಕಾರಿನ ಮುಂಭಾಗ ಯಾವುದು ಎಂದು ತಿಳಿಯಲಾಗದಷ್ಟು ನಜ್ಜುಗುಜ್ಜಾಗಿದ್ದು ತಡೆಬೇಲಿಯ ಮೇಲೆ ಸಿಕ್ಕಿಕೊಂಡಿತ್ತು. ಮರುದಿನ ಬೆಳಗ್ಗೆ ಜೆಸಿಬಿ ಮೂಲಕ ಕಾರನ್ನು ತೆರವುಗೊಳಿಸಲಾಗಿದೆ.