ಸಾಗರ : ಯಡಿಯೂರಪ್ಪನವರು ಕೇಂದ್ರ ಪರಿಷ್ಠರ ಮೇಲೆ ತಮ್ಮ ಪ್ರಭಾವ ಬಳಸಿ ಟಿಕೆಟ್ ಹಂಚಿಕೆ ಮಾಡಿಸಿದ್ದಾರೆ. ಅದರೆ ಪರಿಣಾಮ ಎನು ಎನ್ನುವುದು ಲೋಕಸಭೆ ಚುನಾವಣೆ ನಂತರ ಗೊತ್ತಾಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದ್ದಾರೆ. ಭಾನುವಾರ ಇಲ್ಲಿ ಕರೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಚುನಾವಣೆಯಲ್ಲಿ ಗೆದ್ದು ಮತ್ತೆ ಬಿಜೆಪಿಗೆ ಹೋಗುತ್ತೇನೆ. ನನ್ನ ಸ್ಪರ್ಧೆ ಬಗ್ಗೆ ದೊಡ್ಡಮಟ್ಟದ ಚರ್ಚೆಯಾಗುತ್ತಿದೆ. ಮೋದಿ ಕುಟುಂಬ ರಾಜಕಾರಣ ವಿರೋಧಿಸುತ್ತಾರೆ. ಈ ಚುನಾವಣೆ ಬಳಿಕ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಕೊನೆಯಾಗಲಿದೆ. ನನ್ನ ಸ್ಪರ್ಧೆ ಬಿಜೆಪಿ ವಿರುದ್ಧವಲ್ಲ, ಕುಟುಂಬ ರಾಜಕಾರಣದ ವಿರುದ್ಧ ಎಂದು ಈಶ್ವರಪ್ಪ ಪುನರುಚ್ಚರಿಸಿದರು.